ಪತ್ರಕರ್ತ, ಬರಹಗಾರ, ಹೋರಾಟಗಾರ, ನಿರ್ದೇಶಕ ಹೀಗೆ ಹಲವು ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್ ಅವರು ಭರ್ತಿ ಏಳು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಮಯೂರ ಮೋಷನ್ ಪಿಕ್ಚರ್ ನಿರ್ಮಾಣದ ಹುಲಿನಾಯಕ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.
‘ಅನ್‌ಲಾಕ್ ರಾಘವ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಲು ಸಿದ್ದತೆ ನಡೆಸಿರುವ ಯುವನಟ ಮಿಲಿಂದ್ ಗೌತಮ್, `ಹುಲಿನಾಯಕ’ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ಮಿಂಚಲು ರೆಡಿಯಾಗಿದ್ದಾರೆ. ಅನ್ ಲಾಕ್ ರಾಘವ ನಂತರ ಮಿಲಿಂದ್ ಗೌತಮ್ ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ‘ಮಯೂರ ಮೋಶನ್ ಪಿಕ್ಚರ್ಸ್’ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ. ನಿರ್ಮಿಸುತ್ತಿರುವ ಸಿನಿಮಾ ಇದಾಗಿದ್ದು, ಸಿನಿಮಾದ ನಾಯಕ ನಟಿ ಮತ್ತು ಇತರ ಕಲಾವಿದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ವರಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಲ್ಲಿ ಈ ಸಿನಿಮಾದ ಮೊದಲ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ನಟ ಕಂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ‘ಹುಲಿ ನಾಯಕ’ ಸಿನಿಮಾದ ಮೊದಲ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ ಸಿನಿಮಾಗಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡ ಹುಲಿನಾಯಕನಿಗೆ ಬೆಂಬಲವಾಗಿ ನಿಂತಿದೆ