ನಟಿ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ ‘ನಿರ್ಭಯ 2’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ‘ನಿರ್ಭಯ 2’ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

‘ರೆತಿಕ್ಷ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ. ಆರ್ ನಿರ್ಮಿಸಿರುವ, ‘ನಿರ್ಭಯ 2’ ಸಿನಿಮಾಕ್ಕೆ ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ.

ಶ್ರಾವ್ಯ ರಾವ್ (ಸಾತ್ವಿಕ) ಅವರೊಂದಿಗೆ ಅರ್ಜುನ್ ಕೃಷ್ಣ, ಹರೀಶ್ ಜಲೀಲ ಮುಂತಾದವರು ‘ನಿರ್ಭಯ 2’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ‘ನಿರ್ಭಯ 2’ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಅಕ್ಟೋಬರ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಯೋಚನೆ ಹಾಕಿಕೊಂಡಿದೆ.





