ಕನ್ನಡದ ಬಿಗ್ ಬಾಸ್ ವಿಜೇತ, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಈಗ ‘ಅಧಿಪತ್ರ’ ಸಿನಿಮಾದ ಮೂಲಕ ಮತ್ತೊಂದು ಬಿಗ್ ಎಂಟ್ರಿಕೊಡುವ ಯೋಜನೆಯಲ್ಲಿದ್ದಾರೆ. ಇತ್ತೀಚೆಗೆ ನಡೆದ ರೂಪೇಶ್ ಶೆಟ್ಟಿ ಜನ್ಮದಿನದ ಸಂದರ್ಭದಲ್ಲಿ ಅವರ ಹೊಸ ಸಿನಿಮಾ ‘ಅಧಿಪತ್ರ’ದ ಟೈಟಲ್ ಅನೌನ್ಸ್ ಆಗಿದ್ದು, ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಚಯನ್ ಶೆಟ್ಟಿ ಎಂಬುವರು ಮೊದಲಬಾರಿಗೆ ‘ಅಧಿಪತ್ರ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದು, ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರುವ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅಧಿಪತ್ರ’ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
‘ಕೆ. ಆರ್ ಸಿನಿಕಂಬೈನ್ಸ್’ ಬ್ಯಾನರ್ ನಡಿಯಲ್ಲಿ ತಯಾರಾಗುತ್ತಿರುವ ‘ಅಧಿಪತ್ರ’ಸಿನಿಮಾದ ಶೂಟಿಂಗ್ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿದೆ. ಸದ್ಯ ಈ ಸಿನಿಮಾದ ಇತರ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.