ಬುಧವಾರ, ಜುಲೈ 2, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Sambavami Yuge Yuge: ಯುವಕರಿಗೆ ಹೊಸ ಸಂದೇಶ ನೀಡಲಿದೆ ‘ಸಂಭವಾಮಿ ಯುಗೇ ಯುಗೇ’ -. ಜೂ.21ರಂದು ರಿಲೀಸ್‌

Bharathi Javalliby Bharathi Javalli
10/06/2024
in Majja Special
Reading Time: 1 min read
Sambavami Yuge Yuge: ಯುವಕರಿಗೆ ಹೊಸ ಸಂದೇಶ ನೀಡಲಿದೆ ‘ಸಂಭವಾಮಿ ಯುಗೇ ಯುಗೇ’ -. ಜೂ.21ರಂದು ರಿಲೀಸ್‌

Sambavami Yuge Yuge: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶವಿರುವ ‘ಸಂಭವಾಮಿ ಯುಗೇ ಯುಗೇ’(Sambavami Yuge Yuge) ಜೂನ್ 21ರಂದು ಬಿಡುಗಡೆಯಾಗಲಿದೆ. ಜಯ್ ಶೆಟ್ಟಿ(Jay Shetty) – ನಿಶಾ ರಜಪೂತ್(Nisha Rajut) ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದ ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ ಮಾತನಾಡಿ ನಾನು ಕಳೆದ  ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಶಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ  ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ ವಿಭಿನ್ನ  ಕಮರ್ಷಿಯಲ್  ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು  ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ  ಈ  ಚಿತ್ರ ಮಾಡಿದ್ದೇವೆ ಎಂದು ಹೇಳಿದರು.

ನಾಯಕ ಜಯ್‌ ಶೆಟ್ಟಿ((Jay Shetty) ಮಾತನಾಡಿ ಈ ಹಿಂದೆ 1975 ಎಂಬ ಚಿತ್ರದಲ್ಲಿ ಅಭಿನಯಿಸಿದ್ದೆ. ಕೃಷಿ ಮತ್ತು ರೈತರ ಮೇಲೆ ಮಾಡಿದ ಚಿತ್ರವಿದು, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ.  ಮುಂದೇನಾಗುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್  ಎಂದರು.

ನಾಯಕಿ ನಿಶಾ ರಜಪೂತ್(Nisha Rajput) ಮಾತನಾಡುತ್ತ ನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ  ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು, ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದು ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Desai: ‘ದೇಸಾಯಿ’ ಚಿತ್ರದ ಹಾಡು ರಿಲೀಸ್‌ – ಚಿತ್ರಕ್ಕೆ ಸಾಥ್‌ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

Desai: ‘ದೇಸಾಯಿ’ ಚಿತ್ರದ ಹಾಡು ರಿಲೀಸ್‌ - ಚಿತ್ರಕ್ಕೆ ಸಾಥ್‌ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.