ಭಾನುವಾರ, ಜುಲೈ 6, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

“ಸಾಮ್ರಾಟ್ ಮಾಂಧಾತ”ಟ್ರೈಲರ್ ಬಿಡುಗಡೆಗೊಳಿಸಿ ಶುಭಕೋರಿದ್ರು ಓಂ ಸಾಯಿಪ್ರಕಾಶ್!

Vishalakshi Pby Vishalakshi P
27/02/2024
in Majja Special
Reading Time: 1 min read
“ಸಾಮ್ರಾಟ್ ಮಾಂಧಾತ”ಟ್ರೈಲರ್ ಬಿಡುಗಡೆಗೊಳಿಸಿ ಶುಭಕೋರಿದ್ರು ಓಂ ಸಾಯಿಪ್ರಕಾಶ್!

ಇತ್ತೀಚಿನ ದಿಗಳಲ್ಲಿ ಭಕ್ತಿಪ್ರಧಾನ ಮತ್ತು ಪೌರಾಣಿಕ ಚಿತ್ರಗಳ ನಿರ್ಮಾಣ ಕಡಿಮೆಯಾಗುತ್ತಿವೆ. ಅದರಲ್ಲೂ ಕೆಲವರು ಅಂಥಾ ಸಾಹಸಕ್ಕೆ ಮುಂದಾಗುತ್ತಿದ್ದಾರೆ. ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರು ಸೂರ್ಯವಂಶದ ಸಾಮ್ರಾಟ್ ಮಂಧಾತನ ಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ನಿರ್ಮಾಣದ ಜೊತೆಗೆ ಚಿತ್ರದ ನಿರ್ದೇಶನ ಕೂಡ ಮಾಡಿದ್ದಾರೆ. ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಹಂತಕ್ಕೆ ತಂದಿದ್ದಾರೆ. ಇತ್ತೀಚೆಗೆ ಸಾಮ್ರಾಟ್ ಮಾಂಧಾರ ಚಿತ್ರದ ಟ್ರೈಲರನ್ನು ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಬಿಡುಗಡೆಗೊಳಿಸಿದರು.

ಇಕ್ಷ್ವಾಕು ವಂಶದ (ಸೂರ್ಯವಂಶ) ಯುವನಾಶ್ವ ಮಹಾರಾಜನ ಮಗನಾದ ಮಾಂಧಾತ ತನ್ನ ಸತ್ಯ ಮತ್ತು ಧರ್ಮದ ಆಡಳಿತದಿಂದಲೇ ಪ್ರಖ್ಯಾತಿ ಗಳಿಸಿದ್ದನು. ಶಶಬಿಂದುವಿನ ಮಗಳು ಬಿಂದುಮತಿ ಚೈತ್ರರಥಿಯನ್ನು ವರಿಸಿದ ಮಾಂಧಾತನಿಗೆ ಪುರುಕುತ್ಸ ಅಥವಾ ಸುಸಂಧಿ, ಅಂಬರೀಷ ಮತ್ತು ಮುಚುಕುಂದರೆಂಬ ಮೂವರು ಗಂಡು ಮಕ್ಕಳು ಮತ್ತು ಐವತ್ತು ಹೆಣ್ಣುಮಕ್ಕಳಿದ್ದರೆಂದು ಹೇಳಲಾಗುತ್ತಿದೆ. ಆತನ ಕಥೆಯನ್ನು “ಸಾಮ್ರಾಟ್ ಮಾಂಧಾತ” ಚಿತ್ರದ ಮೂಲಕ ಹೇಮಂತ್ ಅವರು ನಿರೂಪಿಸ ಹೊರಟಿದ್ದಾರೆ. ಅಂದುಕೊಂಡಂತೆ ಆದರೆ ಏಪ್ರಿಲ್‍ನಲ್ಲಿ ಸಾಮ್ರಾಟ ಮಾಂಧಾತ ತೆರೆಗೆ ಬರುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಮಾತನಾಡಿದ ಓಂ ಸಾಯಿ ಪ್ರಕಾಶ್ ಆಗಿನ ಕಾಲದಲ್ಲಿ ಕಥೆ ಬರೆಯಲು ೬ ತಿಂಗಳು, ವರ್ಷ ಕಷ್ಟಪಡುತ್ತಿದ್ದೆವು. ಒಳ್ಳೆಯ ಕಂಟೆಂಟ್ ಇಟ್ಟುಕೊಂಡು ಮಾಡಿದ ಯಾವುದೇ ಸಿನಿಮಾ ಯಶಸ್ವಿಯಾಗುತ್ತವೆ. ಅದೇ ರೀತಿ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು

ನಿರ್ದೇಶಕ ನಿರ್ಮಾಪಕ ಹೇಮಂತ್ ಕುಮಾರ್ ಮಾತನಾಡಿ ಇದು ಪೌರಾಣಿಕ ಚಿತ್ರ. ಇದರಲ್ಲಿ ಅಭಿನಯಿಸಿರುವ ಎಲ್ಲರೂ ರಂಗಭೂಮಿ ಕಲಾವಿದರು. ಐದಾರು ತಿಂಗಳವರೆಗೆ ಎಲ್ಲರಿಗೂ ತರಬೇತಿ ನೀಡಿದ ನಂತರ ಕ್ಯಾಮೆರಾ ಮುಂದೆ ಅಭಿನಯಿಸಿದ್ದಾರೆ .ಕೋರೋನಾ ಸಮಯದಲ್ಲಿ ಚಿತ್ರೀಕರಣ ಆರಂಭಿಸಿದ್ದೆವು. ವಿಎಫ್‍ಎಕ್ಸ್ ಜಾಸ್ತಿ ಇರೋದ್ರಿಂದ ಚಿತ್ರ ಮೂರು ವರ್ಷ ತೆಗೆದುಕೊಂಡಿತು. ಮುಂದಿನವಾರ ಸೆನ್ಸಾರ್ ಗೆ ಅಪ್ಲೈ ಮಾಡಿ, ಏಪ್ರಿಲ್‍ನಲ್ಲಿ ಬಿಡುಗಡೆ ಮಾಡುವ ಯೋಜನೆಯಿದೆ. ತ್ರೇತಾಯುಗದ ಆದಿಭಾಗದಲ್ಲಿ ಭೂಲೋಕದಲ್ಲಿ ಅಧರ್ಮ ಹೆಚ್ಚಾದಾಗ ಧರ್ಮದೇವ ಶನಿ ಮಹಾತ್ಮನ ಮೊರೆ ಹೋಗುತ್ತಾನೆ. ಆ ಸಂದರ್ಭದಲ್ಲಿ ಶನಿ‌ ಮತ್ತು ಲಕ್ಷ್ಮಿಯ ನಡುವೆ ಯಾರು ಶ್ರೇಷ್ಠರೆಂದು ನಿರ್ಧರಿಸುವ ಕಥೆಯೇ ಸಾಮ್ರಾಟ್ ಮಾಂಧಾತ ಎಂದರು

ಚಿತ್ರದಲ್ಲಿ ಮಾಂಧಾತನಾಗಿ ನಟಿಸಿರುವ ಬಸವರಾಜು ಅವರು ನಾಟಕದಲ್ಲೂ ಸಹ ಅದೇ ಪಾತ್ರ ಮಾಡಿ ಗುರುತಿಸಿಕೊಂಡವರು. ಉಳಿದಂತೆ ಶನಿದೇವನಾಗಿ ನಟಿಸಿರುವ ಸುಂದರಬಾಬು, ಬಿಂದುಮತಿಯಾಗಿ ಕಾಣಿಸಿಕೊಂಡಿರಯವ ಭಾರತಿ, ನಾರದನಾಗಿರುವ ನಂಜುಂಡಪ್ಪ, ಶೌಭರಿ ಮಹರ್ಷಿಯಾಗಿರುವ ನರಸಿಂಹಮೂರ್ತಿ, ಯವನಾಶ್ವನಾಗಿರುವ ಮಂಜುನಾಥ, ಕಲಾನಿರ್ದೇಶಕ ರವಿ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಸಾಮ್ರಾಟ ಮಾಂಧಾತ ಚಿತ್ರಕ್ಕೆ ಆರ್.ವೀರೇಂದ್ರಕುಮಾರ್ ಸಂಭಾಷಣೆ ಸಾಹಿತ್ಯ ರಚಿಸಿದ್ದಾರೆ. ಶಿವರಾಮ್ ಅವರ ಸಂಕಲನ ಈ ಚಿತ್ರಕ್ಕಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ತಲೈವಾಗೆ ಮತ್ತೆ ರೆಡ್‌ಕಾರ್ಪೆಟ್‌ ಹಾಕಿದ ಬಾಲಿವುಡ್‌!

ತಲೈವಾಗೆ ಮತ್ತೆ ರೆಡ್‌ಕಾರ್ಪೆಟ್‌ ಹಾಕಿದ ಬಾಲಿವುಡ್‌!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.