ಮಂಗಳವಾರ, ಜುಲೈ 21, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಶೈನ್ ಶೆಟ್ಟಿ-ಅಂಕಿತ ಅಮರ್ ‘ಜಸ್ಟ್ ಮ್ಯಾರಿಡ್’ ! 

Vishalakshi Pby Vishalakshi P
21/09/2023
in Majja Special
Reading Time: 1 min read
ಶೈನ್ ಶೆಟ್ಟಿ-ಅಂಕಿತ ಅಮರ್ ‘ಜಸ್ಟ್ ಮ್ಯಾರಿಡ್’ ! 

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ. ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. ‘ಅಬ್ಬಾಸ್ ಸ್ಟುಡಿಯೋಸ್’ ಎಂಬ ಹೆಸರಿನಲ್ಲಿ ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಈ ಇಬ್ಬರು ಜಂಟಿಯಾಗಿ ಹುಟ್ಟುಹಾಕಿದ್ದಾರೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿರುವ ‘ಜಸ್ಟ್ ಮ್ಯಾರೀಡ್’ ಎಂಬ ಚಿತ್ರ ನಿರ್ಮಾಣವಾಗುತ್ತಿದೆ.

ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಿ. ಆರ್. ಬಾಬಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿ ಸೇರ್ಪಡೆಯಾಗಿದ್ದಾರೆ.ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ‘ಜಸ್ಟ್ ಮ್ಯಾರಿಡ್’ ಚಿತ್ರದ ‘ಗಂ ಗಣೇಶಾಯ ನಮಃ’ ಎಂಬ ಹಾಡು ‘ಆನಂದ್ ಆಡಿಯೋ’ ಮೂಲಕ ಬಿಡುಗಡೆಯಾಗಿದೆ. ಶಶಿ ಕಾವೂರ್ ಬರೆದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ‌. ವರುಣ್ ರಾಮಚಂದ್ರ, ಮಧ್ವೇಶ್ ಭಾರದ್ವಾಜ್, ಅಭಿಷೇಕ್ ಹಾಗೂ ವಿಶಾಖ್ ಹಾಡಿದ್ದಾರೆ‌. ಗಣಪತಿ ಕುರಿತಾದ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ‌.

ಸಿನಿಮಾದ ಹೆಸರೆ ಹೇಳುವಂತೆ ‘ಜಸ್ಟ್ ಮ್ಯಾರಿಡ್’ ಒಂದು ಪ್ರೇಮಕಥೆಯ ಸಿನಿಮಾ. ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸುತ್ತಿದ್ದು, ಶೃತಿ ಹರಿಹರನ್, ಅಚ್ಯುತಕುಮಾರ್, ಸಾಕ್ಷಿ ಅಗರವಾಲ್, ರವಿಶಂಕರ್ ಗೌಡ, ವಾಣಿ ಹರಿಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕ್ಲಾಸ್ ಹಾಗೂ ಮಾಸ್ ಎರಡು ಥರದ ಆಡಿಯನ್ಸ್ ಗೂ ಇಷ್ಟವಾಗುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಈ ತಿಂಗಳ ಕೊನೆಗೆ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದೆ ಚಿತ್ರತಂಡ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ  ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ದಿ ಜಡ್ಜ್ ಮೆಂಟ್’!

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ  ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ದಿ ಜಡ್ಜ್ ಮೆಂಟ್’!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.