ಬುಧವಾರ, ಜುಲೈ 2, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Shiva Rajkumar: ಹೊಸ ಅವತಾರದಲ್ಲಿ ಶಿವಣ್ಣ ಪ್ರತ್ಯಕ್ಷ -‘ಭೈರವನ ಕೊನೆ ಪಾಠ’ ಸಿನಿಮಾದ ಫಸ್ಟ್ ಲುಕ್ ಅನಾವರಣ

Bharathi Javalliby Bharathi Javalli
09/07/2024
in Majja Special
Reading Time: 1 min read
Shiva Rajkumar: ಹೊಸ ಅವತಾರದಲ್ಲಿ ಶಿವಣ್ಣ ಪ್ರತ್ಯಕ್ಷ -‘ಭೈರವನ ಕೊನೆ ಪಾಠ’ ಸಿನಿಮಾದ ಫಸ್ಟ್ ಲುಕ್ ಅನಾವರಣ

Shiva Rajkumar: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್(Shiva Rajkumar) ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಭೈರವನ ಕೊನೆಯ ಪಾಠ’. ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿದ್ದ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಶಿವಣ್ಣ ಜನ್ಮದಿನದ ವಿಶೇಷವಾಗಿ ನಿರ್ದೇಶಕ ಹೇಮಂತ್ ಎಂ ರಾವ್ ಹಾಗೂ ಇಡೀ ತಂಡ ಎರಡು ದಿನ ಮುಂಚಿತವಾಗಿಯೇ ‘ಭೈರವನ ಕೊನೆ ಪಾಠ’(Bhairavana Kone Pata)  ಫಸ್ಟ್ ಲುಕ್ ಉಡುಗೊರೆಯಾಗಿ ನೀಡಿದೆ.

‘ಭೈರವನ ಕೊನೆಯ ಪಾಠ’ (Bhairavana Kone Pata) ಸಿನಿಮಾದ ಫಸ್ಟ್ ಲುಕ್ ಖಡಕ್ ಆಗಿದ್ದು, ಹಿಂದೆಂದೂ ಕಾಣದ ಹೊಸ ಅವತಾರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಎರಡು ಪೋಸ್ಟರ್ ಗಳಲ್ಲಿ ಎರಡು ರೀತಿಯ ಲುಕ್ ಮೂಲಕ ಮಾಸ್ ಲೀಡರ್ ಪ್ರತ್ಯಕ್ಷರಾಗಿದ್ದಾರೆ. ಗಡ್ಡ ಹಾಗೂ ಮೀಸೆ ಬೆಳ್ಳಗಾಗಿದೆ. ಯುದ್ಧಕ್ಕೆ ಸಜ್ಜಾದ ಪೋಷಾಕು, ಬೆನ್ನಿಗೆ ಬಾಣಗಳನ್ನು ಇಟ್ಟುಕೊಂಡಿದ್ದಾರೆ. ಹಿಂಭಾಗದಲ್ಲಿ ಕುದುರೆ ಇದೆ. ‘ಭೈರವನ ಕೊನೆ ಪಾಠ’ ಎಂಬುದರ ಜೊತೆಗೆ ‘ರಾಜನಿಗೆ ಪಾಠಗಳು’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ. ಪೋಸ್ಟರ್ ನಲ್ಲಿ ಹಂಪಿಯ ಕಮಲ ಮಹಲ್ ಕೂಡ ಇರುವುದು ಸಿನಿಮಾ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಚಿತ್ರದ ಬಗ್ಗೆ ಮಾತನಾಡಿದ ಡಾ.ಶಿವ ರಾಜ್‌ಕುಮಾರ್(Shiva Rajkumar), “ಅಪ್ಪಾಜಿ, ಈ ರೀತಿಯ ಪಾತ್ರಗಳನ್ನು ನಿಭಾಯಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಭೈರವ ಪಾತ್ರದಲ್ಲಿ ನಟಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ.  ಹೇಮಂತ್ ಎಂ ರಾವ್ ಮತ್ತು ತಂಡದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ. ಹೇಮಂತ್ ಎಂ ರಾವ್ ಮಾತನಾಡಿ, ”ಭೈರವನ ಕೊನೆ ಪಾಠ(Bhairavana Kone Pata)ನನ್ನ ಮಹತ್ವಾಕಾಂಕ್ಷೆಯ ಚಿತ್ರ. ಸೂಪರ್‌ ಸ್ಟಾರ್ ಸಿನಿಮಾವನ್ನು ನಿರ್ದೇಶಿಸುವ ಜವಾಬ್ದಾರಿಯು ಸವಾಲಿನ ಕೆಲಸವಾಗಿದೆ. ಶಿವಣ್ಣ ಜೊತೆ ಕೆಲಸ ಮಾಡುವುದು ಪ್ರತಿಯೊಬ್ಬ ನಿರ್ದೇಶಕರ ಆಸೆ. ಇಡೀ ದಿನ ಬೆಟ್ಟದ ಮೇಲೆ ಫೋಟೋಶೂಟ್ ನಡೆದಿದೆ. ಇದು ಕೆಲವು ಶತಮಾನಗಳ ಹಿಂದಿನ ಸಿನಿಮಾ” ಎಂದಿದ್ದಾರೆ.

ನಿರ್ಮಾಪಕ ವೈಶಾಕ್ ಜೆ ಗೌಡ ಮಾತನಾಡಿ, “ಭೈರವನ ಕೊನೆ ಪಾಠ ತುಂಬಾ ವಿಶೇಷವಾದ ಚಿತ್ರವಾಗಲಿದೆ ಎಂದು ನನಗೆ ತಿಳಿದಿತ್ತು. ಚಿತ್ರ ಅದ್ಧೂರಿಯಾಗಿ ಮೂಡಿಬರಲಿದೆ. ಸೆಟ್‌ಗಳು, ಸ್ಥಳಗಳು, ಎಲ್ಲವನ್ನೂ ದೊಡ್ಡದಾಗಿ ಪ್ಲ್ಯಾನ್ ಮಾಡಲಾಗಿದೆ ಮತ್ತು ನಿಖರವಾಗಿ ಕಾರ್ಯಗತಗೊಳಿಸಲಾಗುತ್ತದೆ. ನನಗೆ ತುಂಬಾ ವಿಶ್ವಾಸವಿದೆ ಇದು ಅತ್ಯುತ್ತಮ ಚಲನಚಿತ್ರವಾಗಲಿದೆ” ಎಂದು ಅಭಿಪ್ರಾಯಪಟ್ಟರು. ಹೇಮಂತ್ ರಾವ್(Hemanth M Rao) ಅವರು ಈ ಮೊದಲು ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಹಾಗೂ ಸೈಡ್ ಬಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಅವರು ಶಿವರಾಜ್ಕುಮಾರ್ ಜೊತೆ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ‘ಭೈರವನ ಕೊನೆ ಪಾಠ’ ಚಿತ್ರವನ್ನು ‘ವೈಶಾಖ್‍ ಜೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಡಾ. ವೈಶಾಖ್‍ ಜೆ ಗೌಡ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Kananjaru:  ‘ಕಣಂಜಾರು’ ಟೀಸರ್ 12 ಲಕ್ಷ ವೀಕ್ಷಣೆ – ಶೀಘ್ರದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ

Kananjaru:  'ಕಣಂಜಾರು' ಟೀಸರ್ 12 ಲಕ್ಷ ವೀಕ್ಷಣೆ – ಶೀಘ್ರದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.