ನಟಿ ಶ್ರೀಲೀಲಾ ಮತ್ತು ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲಾನ್ ರೂಪಿಸಿಕೊಂಡಿದೆ.
ಬೋಯಪಾಟಿ ಶ್ರೀನು ಆ್ಯಕ್ಷನ್-ಕಟ್ ಹೇಳಿರುವ ಆ್ಯಕ್ಷನ್ ಎಂಟರ್ ಟೈನರ್ ‘ಸ್ಕಂದ’ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ-ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ‘ಸಿಲ್ವರ್ ಸ್ಕ್ರೀನ್’ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.
ಇಷ್ಟು ದಿನಗಳ ಕಾಲ ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ‘ಸ್ಕಂದ’ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡತಿ ಶ್ರೀಲೀಲಾ, ರಾಮ್ಗೆ ಜೋಡಿಯಾಗಿ ನಟಿಸಿದ್ದಾರೆ. ಮಾಡರ್ನ್ ಹುಡುಗಿಯ ಗೆಟಪ್ ನಲ್ಲಿ ಕಾಣಿಸಿಕೊಂಡಿರುವ ಶ್ರೀಲೀಲಾ ಲುಕ್ ಆಡಿಯನ್ಸ್ ಗಮನ ಸೆಳೆಯುತ್ತಿದೆ. ಒಟ್ಟಾರೆ ಬ್ಯಾಕ್ ಟು ಬ್ಯಾಕ್ ಶ್ರೀಲೀಲಾ ತೆಲುಗು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಸಖತ್ ಖುಷಿ ಮೂಡ್ ನಲ್ಲಿದ್ದಾರೆ ಶ್ರೀಲೀಲಾ.