ಬುಧವಾರ, ಜೂನ್ 3, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಹೀರೋ ಆದ ಆರ್ಮುಗ ರವಿಶಂಕರ್ ಪುತ್ರ….ಮಗನ ಸಿನಿಮಾಗೆ ಅಪ್ಪನೇ ಡೈರೆಕ್ಟರ್!

Vishalakshi Pby Vishalakshi P
25/10/2023
in Majja Special
Reading Time: 1 min read
ಹೀರೋ ಆದ ಆರ್ಮುಗ ರವಿಶಂಕರ್ ಪುತ್ರ….ಮಗನ ಸಿನಿಮಾಗೆ ಅಪ್ಪನೇ ಡೈರೆಕ್ಟರ್!

ಸ್ಟಾರ್ ನಟ-ನಟಿಯರು ಮಕ್ಕಳು ಸಿನಿಮಾ ಲೋಕ ಪ್ರವೇಶಿಸೋದು ಕಾಮನ್. ಅದರಂತೇ, ನಟ ಆರ್ಮುಗಂ ರವಿಶಂಕರ್ ಪುತ್ರ ಅದ್ವೆ `ಸುಬ್ರಹ್ಮಣ್ಯ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾರೆ. ದಸರಾ ಹಬ್ಬದಂದು ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ವಿಶೇಷ ಅಂದರೆ ಮಗನಿಗಾಗಿ ಆರ್ಮುಗಂ ರವಿಶಂಕರ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡ್ತಿದ್ದಾರೆ. ಪುತ್ರನ ಚೊಚ್ಚಲ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ  ನಿರ್ದೇಶನಕ್ಕೆ ಮರಳುತ್ತಿದ್ದಾರೆ

ಆರ್ಮುಗ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ರವಿಶಂಕರ್ ಗೆ ಈ ಚಿತ್ರದಿಂದ ಒಳ್ಳೆ ಹೆಸರು ಬಂದಿತ್ತು. ಆದರೆ, ಅದ್ಯಾಕೋ ಏನೋ ಗೊತ್ತಿಲ್ಲ ದುರ್ಗಿ ನಂತರ ಡೈರೆಕ್ಷನ್ ಕಡೆ ಮುಖ ಮಾಡಿರಲಿಲ್ಲ. ಇದೀಗ, 20 ವರ್ಷಗಳು ಉರುಳಿದ್ಮೇಲೆ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ. ಅದು ಅವರ ಮಗನ ಸಿನಿಮಾಗೆ ಅನ್ನೋದು ವಿಶೇಷ.

ನಟ ರವಿಶಂಕರ್ ಅವರ ಪುತ್ರ ಅದ್ವೆ ವಿದ್ಯಾಭ್ಯಾಸ ಮುಗಿಸಿ, ವಿದೇಶದಲ್ಲಿ ನಟನಾ ತರಭೇತಿ ಪಡೆದು ವಾಪಾಸ್ ಆಗಿದ್ದಾರೆ. ಮಗನಲ್ಲಿ ಕಲಾವಿದನಾಗುವ ಕನಸು ಚಿಗುರೊಡೆದಿದ್ದನ್ನ ಗಮನಿಸಿದ ರವಿಶಂಕರ್ ಅವರು, ಪುತ್ರನನ್ನು ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ತಾತನಂತೆ, ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಅದ್ವೆ ಮುಖಕ್ಕೆ ಬಣ್ಣ ಹಚ್ಚಿಕೊಂಡು ಫೀಲ್ಡಿಗಿಳಿದಿದ್ದಾರೆ. ದಸರಾ ಹಬ್ಬದಂದು ಅದ್ವೆ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ‌ ಮಾಡಲಾಗಿದೆ. ಈ ಚಿತ್ರಕ್ಕೆ ಸುಬ್ರಹ್ಮಣ್ಯ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಪೋಸ್ಟರ್ ನಲ್ಲಿ ದೈವಿಕ ಅಂಶಗಳು ಹೈಲೆಟ್ ಆಗಿವೆ. ಪೋಸ್ಟರ್ ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಮತ್ತು ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವೆ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ನಿಗೂಢವಾಗಿ ಕಾಣುವ ಪುಸ್ತಕವನ್ನು ಇಟ್ಟುಕೊಂಡಿದ್ದಾರೆ.

ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ ಹಿಡಿದಿದ್ದು, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದ್ದು, ಡಿಸೆಂಬರ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
‘ಮಗ್ಗಿ ಪುಸ್ತಕ’ ಸಿನಿಮಾದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

'ಮಗ್ಗಿ ಪುಸ್ತಕ' ಸಿನಿಮಾದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.