ನಟ ಡಾಲಿ ಧನಂಜಯ್ ಒಡೆತನದ ‘ಡಾಲಿ ಪಿಕ್ಚರ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಟಗರು ಪಲ್ಯ’ ಸಿನಿಮಾ ಇದೇ ನವೆಂಬರ್ ಮೊದಲವಾರ ಬಿಡುಗಡೆಯಾಗುತ್ತಿದೆ. ಸದ್ಯ ಹಾಡುಗಳ ಮೂಲಕ ತನ್ನ ಪ್ರಚಾರ ಕಾರ್ಯ ನಡೆಸುತ್ತಿರುವ ‘ಟಗರು ಪಲ್ಯ’ ಚಿತ್ರತಂಡ, ಇದೀಗ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ.
ಈಗಾಗಲೇ ರಿಲೀಸ್ ಆಗಿರುವ ‘ಟಗರು ಪಲ್ಯ’ ಸಿನಿಮಾದ ಟೈಟಲ್ ಟ್ರ್ಯಾಕ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರತಂಡ ‘ಸೂರ್ಯಕಾಂತಿ ನಾನು…’ ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ.

ಸ್ವತಃ ಧನಂಜಯ್ ಅವರೇ ಕ್ಯಾಚಿ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಹೆಜ್ಜೆ ಹಾಕಿದ್ದಾರೆ. ‘ಟಗರು ಪಲ್ಯ’ ಚಿತ್ರದಲ್ಲಿ ನಾಗಭೂಷಣ್ ನಾಯಕನಾಗಿದ್ದು, ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಪ್ರೇಮ್ ನಾಯಕ ನಟಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.





