ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ವಾಮನ’ ಚಿತ್ರದ ಆ್ಯಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ‘ವಾಮನ’ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.
‘ಇಕ್ವಿನಾಕ್ಸ್ ಗ್ಲೊಬಲ್ ಎಂಟರ್ಟೈನ್ಮೆಂಟ್’ ಲಾಂಛನದಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು. ಶಂಕರ್ ರಾಮನ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನವಿದೆ. ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
‘ವಾಮನ’ ಸಿನಿಮಾದಲ್ಲಿ ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಜೋಡಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು ‘ವಾಮನ’ ಚಿತ್ರದ ತಾರಾಬಳಗದಲ್ಲಿದ್ದಾರೆ.