Dwarakish: ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಪ್ರತಿಭೆ ದ್ವಾರಕೀಶ್(Dwarakish) ಇಂದು ಇಹಲೋಕ ತ್ಯಜಿಸಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ದ್ವಾರಕೀಶ್ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿದಿದ್ದು, ಚಿತ್ರರಂಗದ ಹಿರಿಯ ಕೊಂಡಿ ಕಳಚಿದೆ.
1942ರಲ್ಲಿ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಿಸಿದ ದ್ವಾರಕೀಶ್(Dwarakish) 1963ರಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. 81 ವರ್ಷದ ದ್ವಾರಕೀಶ್(Dwarakish) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ದ್ವಾರಕೀಶ್(Dwarakish) ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಕನ್ನಡದ ಕುಳ್ಳ ಎಂದೇ ಖ್ಯಾತಿ ಗಳಿಸಿಕೊಂಡಿದ್ದ ದ್ವಾರಕೀಶ್ ಅಗಲಿಕೆ ಚಿತ್ರರಂಗಕ್ಕೆ ತುಂಬಲಾರದ ನಷ್ಟ.
1964ರರಲ್ಲಿ ತೆರೆಕಂಡ ‘ವೀರ ಸಂಕಲ್ಪ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್(Dwarakish), ‘ಕುಳ್ಳ ಏಜೆಂಟ್’, ‘ಸಿಂಗಪೂರಿನಲ್ಲಿ ರಾಜ ಕುಳ್ಳ’, ‘ಮಂಕುತಿಮ್ಮ’, ‘ಪ್ರೀತಿ ಮಾಡು ತಮಾಷೆ ನೋಡು’, ‘ಕಳ್ಳ-ಕುಳ್ಳ’, ‘ಪ್ರಚಂಡ ಕುಳ್ಳ’, ‘ಆಪ್ತಮಿತ್ರ’(Apthamithra) ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿಕೊಂಡಿದ್ದರು.
ನಟನೆ ಜೊತೆಗೆ ನಿರ್ಮಾಣದಲಿ ಹೆಚ್ಚು ತೊಡಗಿಸಿಕೊಂಡಿದ್ದ ದ್ವಾರಕೀಶ್(Dwarakish) ಡಾ.ರಾಜ್ ಅಭಿನಯದ ‘ಮೇಯರ್ ಮುತ್ತಣ್ಣ’ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಸುಮಾರು 40ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ‘ಆಪ್ತಮಿತ್ರ’(Apthamithra), ‘ವಿಷ್ಣುವರ್ಧನ’, ‘ಚೌಕ’ 2000ರದ ನಂತರದಲ್ಲಿ ಇವರ ನಿರ್ಮಾಣದಲ್ಲಿ ತೆರೆಕಂಡು ಹೆಚ್ಚು ಗಳಿಕೆ ಕಂಡ ಸಿನಿಮಾಗಳು.