ಗುರುವಾರ, ಜುಲೈ 10, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಸೆಟ್ಟೇರಿತು ಯಂಗ್ ಡೈನಾಮಿಕ್ ಪ್ರಣಂ ದೇವರಾಜ್  ನಟನೆಯ `S/O ಮುತ್ತಣ್ಣ’ಸಿನಿಮಾ !

Vishalakshi Pby Vishalakshi P
08/01/2024
in Majja Special
Reading Time: 1 min read
ಸೆಟ್ಟೇರಿತು ಯಂಗ್ ಡೈನಾಮಿಕ್ ಪ್ರಣಂ ದೇವರಾಜ್  ನಟನೆಯ `S/O ಮುತ್ತಣ್ಣ’ಸಿನಿಮಾ !

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ. ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ.

ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ.

ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಇರುವುದೆಲ್ಲವ ಬಿಟ್ಟು ಡೈರೆಕ್ಟರ್ ಹೊಸ ಸಿನಿಮಾ ’ಲೈಫ್ Today’ಗೆ ಧ್ರುವ ಸರ್ಜಾ ಸಾಥ್!

ಇರುವುದೆಲ್ಲವ ಬಿಟ್ಟು ಡೈರೆಕ್ಟರ್ ಹೊಸ ಸಿನಿಮಾ ’ಲೈಫ್ Today’ಗೆ ಧ್ರುವ ಸರ್ಜಾ ಸಾಥ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.